;
top of page

ಮಂಗಳೂರಿನಿಂದ ಕ್ರೂಸ್ ಪ್ರವಾಸೋದ್ಯಮಕ್ಕೆ ಹೊಸ ಚಾಲನೆ: ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ

Aug 1
1 min read

ಕರ್ನಾಟಕದ ಕರಾವಳಿ ಭಾಗದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಸೂಚನೆಯಂತೆ, ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ಪ್ರಮುಖ ಸಂಸ್ಥೆಯಾದ ವಾಟರ್‌ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ತಾತ್ವಿಕ ಅನುಮೋದನೆ ನೀಡಿದೆ ಎಂದು ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇತ್ತೀಚೆಗೆ ಮುಂಬೈನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಮಂಗಳೂರಿನ ಮೂಲಸೌಕರ್ಯ, ಮಾರುಕಟ್ಟೆ ಅವಕಾಶಗಳು ಹಾಗೂ ಕಾರ್ಯಾಚರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಮುಂದಿನ ತಿಂಗಳು ಸಂಸ್ಥೆಯ ತಾಂತ್ರಿಕ ತಂಡವು ಮಂಗಳೂರಿಗೆ ಭೇಟಿ ನೀಡಿ ಬಂದರಿನ ಸೌಲಭ್ಯಗಳು ಮತ್ತು ಪ್ರವಾಸೋದ್ಯಮ ಸಾಧ್ಯತೆಗಳ ಕುರಿತು ಸಮಗ್ರ ಸ್ಥಳ ಪರಿಶೀಲನೆ ನಡೆಸಲಿದೆ.

ಇದರ ಜೊತೆಗೆ, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರೂಸ್ ಟರ್ಮಿನಲ್ ನಿರ್ಮಿಸುವ ಸಾಧ್ಯತಾ ಅಧ್ಯಯನಕ್ಕೂ ಸೂಚಿಸಲಾಗಿದೆ. ಈ ಯೋಜನೆಯು ಜಾರಿಗೆ ಬಂದರೆ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ಸಿಗಲಿದ್ದು, ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಹಾಗೂ ಹೂಡಿಕೆ ಅವಕಾಶಗಳು ಗಣನೀಯವಾಗಿ ಹೆಚ್ಚಲಿವೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page