;
top of page

ಮಂಗಳೂರು: ಗೋಡೆ ಕುಸಿದು ದುರಂತ: ಮೂವರು ಸಾವು ಶಂಕೆ

  • Jul 1
  • 1 min read

ಮಂಗಳೂರಿನಲ್ಲಿ ತಡೆಗೋಡೆಯೊಂದು ಬಾಡಿಗೆ ಮನೆಗಳ ಮೇಲೆ ಕುಸಿದು ಬಿದ್ದ ಪರಿಣಾಮ, ಆರು ಮಂದಿ ಅವಶೇಷಗಳಡಿ ಸಿಲುಕಿದ ದಾರುಣ ಘಟನೆ ಸಂಭವಿಸಿದೆ. ತಡೆಗೋಡೆ ಕುಸಿತದ ರಭಸಕ್ಕೆ ನಾಲ್ಕು ಮನೆಗಳ ಹಿಂಭಾಗದ ಗೋಡೆಗಳು ಸಂಪೂರ್ಣ ಜಖಂಗೊಂಡಿದ್ದು, ಎರಡು ಕುಟುಂಬಗಳಿಗೆ ತೀವ್ರ ಹಾನಿಯಾಗಿದೆ.

ಘಟನೆ ನಡೆದ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಲಾಲ್‌ಬಾಬು ಹಾಗೂ ಇಬ್ಬರು ಬಾಲಕಿಯರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಲಾಲ್‌ಬಾಬು ಅವರ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮತ್ತೊಂದು ಕುಟುಂಬದ ಶಾಂತಾ ಎಂಬುವವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ H.V., ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page