ಮಂಗಳೂರು ಶಾಕ್: ಫ್ಲೈಓವರ್ ಮೇಲೆ ದಾಳಿ – ‘ಟಾಬ್ಲೆಟ್ ಆರಿಫ್’ ಭೀಕರ ಹತ್ಯೆ!
- Mar 27
- 1 min read

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ (46), ಅಲಿಯಾಸ್ ‘ಟಾಬ್ಲೆಟ್ ಆರಿಫ್’ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ಬಳಿಕ, ಆರೋಪಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಹತ್ಯೆಗೆ ವೈಯಕ್ತಿಕ ವೈಷಮ್ಯ ಅಥವಾ ಹಳೆಯ ದ್ವೇಷ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.







Comments