ಮಂಗಳೂರು: ಚಿಪ್ಪು ಹಂದಿ ಚಿಪ್ಪು ಮಾರಾಟಕ್ಕೆ ಯತ್ನ – ಮೂವರು ಬಂಧನ
- May 7
- 1 min read

ಮಂಗಳೂರು ನಗರದ ಕದ್ರಿ ಉದ್ಯಾನವನದ ಬಳಿಯಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರು ನಿವಾಸಿ ಹೆಚ್.ಆರ್. ಜಗದೀಶ (50), ಕನಕಪುರದ ಸಿದ್ದು ನಾಯ್ಕ (38) ಮತ್ತು ಬನಶಂಕರಿಯ ಬಾಬು (48) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಸುಮಾರು 5.2008 ಕೆ.ಜಿ ತೂಕದ ಚಿಪ್ಪುಗಳನ್ನು ಹಾಗೂ ಅಂದಾಜು 3 ಲಕ್ಷ ರೂ. ಮೌಲ್ಯದ ಕೆಎ 05 ಎಂಎಸ್ 1049 ಸಂಖ್ಯೆಯ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಪವನ್ ನೆಟ್ಟೂರು ಐಪಿಎಸ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್ ಭಾಗವಹಿಸಿದ್ದರು.







Comments