ಲಾರಿಯಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಮಂಗಳೂರಿನಲ್ಲಿ ನಾಲ್ವರ ಬಂಧನ, 27 ಕೋಣಗಳ ರಕ್ಷಣೆ

ಹಾವೇರಿಯಿಂದ ಕೇರಳದ ಕಣ್ಣೂರಿಗೆ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಂಕನಾಡಿ ನಗರ ಪೊಲೀಸರು ಭೇದಿಸಿದ್ದಾರೆ. ಜಪ್ಪಿನಮೊಗೇರು ಇಂಡಿಯಾನ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ, ಐಷರ್ ಲಾರಿಯಲ್ಲಿದ್ದ 27 ಕೋಣಗಳನ್ನು ರಕ್ಷಿಸಿದ್ದಾರೆ.
ಈ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಯ್ಯದ್ ಮೆಹಬೂಬ್ ಅಲಿ, ಹಾವೇರಿಯ ಅರುಣ ಚಂದ್ರಪ್ಪ, ಹಾಸನದ ಹಿರಿಯಣ್ಣ ಗೌಡ ಮತ್ತು ಹಾವೇರಿಯ ಸುನೀಲ್ ಲಕ್ಷ್ಮಪ್ಪ ಜಾವಳ್ಳಿ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಾನುವಾರುಗಳ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರ ವಿರುದ್ಧ ಪ್ರಾಣಿ ಹಿಂಸಾ ತಡೆ ಕಾಯ್ದೆ ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ರಕ್ಷಿಸಲಾದ ಕೋಣಗಳನ್ನು ಗೋಶಾಲೆಗೆ ಒಪ್ಪಿಸಲಾಗಿದೆ.







Comments