ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಪತ್ನಿ ಉಷಾಕುಮಾರಿ ನಿಧನ

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರ ಧರ್ಮಪತ್ನಿ ಉಷಾಕುಮಾರಿ (56) ಅವರು ಅಸೌಖ್ಯದಿಂದ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಾದ ಉಷಾಕುಮಾರಿ ಅವರು ಉರ್ವ ಸೈಂಟ್ ಅಲೋಶಿಯಸ್ ಹೈಸ್ಕೂಲ್‌ನಲ್ಲಿ 26 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಚಿನ್ಮಯ ಹೈಸ್ಕೂಲ್ ಹಾಗೂ ಉಳ್ಳಾಲದ ಭಾರತ್ ಹೈಸ್ಕೂಲ್‌ನಲ್ಲೂ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು. ಅವರು ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಅವರ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.







Comments