ಮಂಗಳೂರು: ಎಮ್ಮೆಕೆರೆಯಲ್ಲಿ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

ಮಂಗಳೂರು: ನಗರದ ಎಮ್ಮೆಕೆರೆ ಕ್ರಾಸ್‌ನ ರಾಮ ಲಕ್ಷ್ಮಿ ಹಾಲ್‌ನಲ್ಲಿ ನಡೆದ ಪದಾಧಿಕಾರಿಗಳ ಕಾರ್ಯಕ್ರಮದ ವೇಳೆ ಗೋಡೆ ಕುಸಿದು ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅತಿಯಾದ ಜನಸಂದಣಿಯಿಂದಾಗಿ ಹೊರಭಾಗದ ಕಾರಿಡಾರ್‌ನಲ್ಲಿ ನಿಂತಿದ್ದ ವಿದ್ಯಾರ್ಥಿಗಳು ಆಧಾರ ಗೋಡೆಗೆ ಒರಗಿಕೊಂಡಾಗ, ದುರ್ಬಲವಾಗಿದ್ದ ಗೋಡೆ ಏಕಾಏಕಿ ಕುಸಿದು ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಹೈಲ್ಯಾಂಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರಲ್ಲಿ ಮಹಮ್ಮದ್ ಶಮಾಜ್ (16) ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ. ಉಳಿದಂತೆ ಮಹಮ್ಮದ್ ಶನಾನ್ ಅಹಮ್ಮದ್ (18), ಹನೀಫ್ (23), ದವೂದ್ ಫರ್ಸಿನ್ ಅಹಮ್ಮದ್ (18) ಹಾಗೂ ಮಹಮ್ಮದ್ ಶಾಕೀಲ್ ಹುಸೈನ್ (18) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.







Comments