;
top of page

ಮಂಗಳೂರಿಗೆ ಬಂದಿಳಿದ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್: ಅಭಿಮಾನಿಗಳಲ್ಲಿ ಸೃಷ್ಟಿಯಾಯ್ತು ಹೊಸ ಸಂಚಲನ!

  • Jun 25
  • 1 min read

ಬಾಲಿವುಡ್‌ನ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಇಂದು ಕರಾವಳಿ ನಗರಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಕಿಂಗ್ ಖಾನ್ ಆಗಮನದ ಸುದ್ದಿಯಿಂದಲೇ ಸ್ಥಳೀಯ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮತ್ತು ಹೊಸ ಸಂಚಲನ ಮೂಡಿದ್ದು, ಮುಂಜಾನೆಯಿಂದಲೇ ಅವರನ್ನು ನೋಡಲು ಜನ ಮುಗಿಬಿದ್ದಿದ್ದರು.

ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಾರುಖ್ ಬಂದಿಳಿದರು. ವಿಮಾನ ನಿಲ್ದಾಣದ ಹೊರಗೆ ನೆರೆದಿದ್ದ ಅಭಿಮಾನಿಗಳ ದಂಡನ್ನು ಕಂಡು, ಬಿಗಿ ಪೊಲೀಸ್‌ ಭದ್ರತೆಯ ನಡುವೆಯೂ ಬಾದ್‌ಶಾ ಎಂದಿನ ತಮ್ಮ ಮುಗುಳ್ನಗೆಯೊಂದಿಗೆ ಕೈಬೀಸಿ ಧನ್ಯವಾದ ತಿಳಿಸಿದರು.

ಮಂಗಳೂರಿನ ಖ್ಯಾತ ‘ರೋಹನ್ ಕಾರ್ಪೊರೇಷನ್’ ಸಂಸ್ಥೆಯು ಅಡ್ಯಾರು ಗಾರ್ಡನ್‌ನಲ್ಲಿ ಆಯೋಜಿಸಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದಾರೆ. ಬಾಲ್ಯದಲ್ಲಿ ಐದು ವರ್ಷಗಳ ಕಾಲ ಮಂಗಳೂರಿನಲ್ಲಿಯೇ ತಮ್ಮ ಅಜ್ಜ-ಅಜ್ಜಿಯ ಜೊತೆ ಕಳೆದಿದ್ದ ಶಾರುಖ್, ಹಲವು ವರ್ಷಗಳ ಬಳಿಕ ಮತ್ತೆ ಕರಾವಳಿಗೆ ಹೆಜ್ಜೆ ಇಟ್ಟಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page