;
top of page

ಗೋರಕ್ಷಣೆ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ 10 ವರ್ಷ ಜೈಲು: ಮಂಗಳೂರು ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

4 days ago
1 min read

ಮಂಗಳೂರು: ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟ ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ತಲಪಾಡಿಯಿಂದ ಜೋಕಟ್ಟೆಗೆ ಅಕ್ರಮ ಗೋ ಸಾಗಾಟ ವಾಹನದ ಮಾಹಿತ ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂಬ ಬಜರಂಗದಳದ ಆರೋಪಕ್ಕೆ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. "ಇದು ನಿಯಮಾನುಸಾರ ಕೇರಳದಿಂದ ನಗರದ ಪರವಾನಗಿ ಹೊಂದಿರುವ ಅಂಗಡಿಗೆ ತರಲಾಗುತ್ತಿದ್ದ ಕಾನೂನುಬದ್ಧ ಮಾಂಸ ಸಾಗಾಟ ಪ್ರಕರಣವಾಗಿದೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧವಿದ್ದರೂ, ಕಾನೂನುಬದ್ಧ ಮಾಂಸ ಮಾರಾಟ ಮತ್ತು ಸಾಗಾಟಕ್ಕೆ ಅವಕಾಶವಿದೆ" ಎಂದು ಅವರು ತಿಳಿಸಿದ್ದಾರೆ.

ಆದ್ದರಿಂದ, ಸಾಗಾಟ ವಾಹನವನ್ನು ತಡೆಯುವುದು, ದಾಳಿ ಮಾಡುವುದು ಅಥವಾ ಬೆದರಿಕೆ ಹಾಕಿ ಕಾನೂನುಬದ್ಧ ಕೆಲಸಕ್ಕೆ ಅಡ್ಡಿಪಡಿಸುವುದು ಅಪರಾಧವಾಗಿದೆ. ಇಂತಹ ಕೃತ್ಯಗಳಲ್ಲಿ ತೊಡಗುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು ಎಂದು ಎಚ್ಚರಿಸಿದ್ದಾರೆ. ಸೋಮವಾರ ಬೆಳಗ್ಗೆ ಮಾಂಸ ಸಾಗಾಟ ವಾಹನ ತಡೆಯಲು ಯತ್ನಿಸಿದ ದೂರು ಬಂದಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಆಯುಕ್ತರು ಹೇಳಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page