ಮಂಗಳೂರು: ಕತ್ತಿ ಹಿಡಿದು ದಾಳಿ ಮಾಡಲು ಯತ್ನಿಸಿದ ವ್ಯಕ್ತಿಯ ಬಂಧನ
- Apr 25
- 1 min read

ಮಂಗಳೂರಿನ ವಾಮಂಜೂರು ನಿವಾಸಿ ನವೀನ್ ಎಂಬಾತ ಕತ್ತಿ ಹಿಡಿದು ಮನೆಗೆ ನುಗ್ಗಿ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದ ನವೀನ್, ಈ ದ್ವೇಷದ ಹಿನ್ನೆಲೆಯಲ್ಲಿ ಕಲಾವರ್ ನಿವಾಸಿ ದೇವಿ ಪ್ರಸಾದ್ ಅವರ ಮನೆಗೆ ತೆರಳಿ ಅವರ ಪೋಷಕರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ದೇವಿ ಪ್ರಸಾದ್ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು.
ಈ ವೇಳೆ ಪರಾರಿಯಾಗಲು ಯತ್ನಿಸಿದ ನವೀನ್ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದು, ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಐಪಿಸಿ 307 ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಂಡಿದ್ದಾರೆ.







Comments