ಮಸೀದಿಯಲ್ಲಿ ಹರಕೆ ಹುಂಡಿ ಕಳವು: ಸಿಸಿಟಿವಿಯಲ್ಲಿ ಆರೋಪಿ ಸೆರೆ
- Apr 2
- 1 min read

ಮಾರ್ಚ್ 30ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಮಸೀದಿಯೊಂದರ ಆವರಣದಲ್ಲಿ ಹರಕೆ ಹುಂಡಿಯನ್ನು ಕಳವು ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮಸೀದಿಯೊಳಗೆ ಪ್ರವೇಶಿಸಿ, ಯಾರೂ ಇಲ್ಲದ ಸಮಯ ನೋಡಿ ಹುಂಡಿಯೊಂದಿಗೆ ಪರಾರಿಯಾಗಿದ್ದಾನೆ. ಈ ಕೃತ್ಯದಿಂದ ಮಸೀದಿಯ ಆಡಳಿತ ಮಂಡಳಿ ಹಾಗೂ ಭಕ್ತರು ಆತಂಕಕ್ಕೊಳಗಾಗಿದ್ದಾರೆ.

ಕಳ್ಳತನದ ದೃಶ್ಯಗಳು ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಆರೋಪಿಯು ನೀಲಿ ಬಣ್ಣದ ಟಿ-ಶರ್ಟ್ ಮತ್ತು ಬಿಳಿ ಪ್ಯಾಂಟ್ ಧರಿಸಿರುವುದು ಕಂಡುಬಂದಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಸಿಟಿವಿ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.







Comments