;
top of page

ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯ: ಉದ್ಯಮಿಗೆ ₹87 ಲಕ್ಷ ವಂಚನೆ

Jul 21
1 min read

ಮ್ಯಾಟ್ರಿಮೋನಿ ವೆಬ್‌ಸೈಟ್‌ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಿವಾಸಿಯಾದ ಉದ್ಯಮಿಗೆ 2024ರ ಮೇ ತಿಂಗಳಲ್ಲಿ ಅನಿಷಾ ಪಾಲನ್ನ (35) ಎಂಬ ಯುವತಿಯ ಪರಿಚಯವಾಗಿತ್ತು.

ಬಳಿಕ ಆರೋಪಿತೆಯು ಇನ್‌ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ದೂರುದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು. ಮದುವೆಯಾಗುವುದಾಗಿ ನಂಬಿಸಿದ ಆಕೆ, ವಿವಿಧ ಕಟ್ಟುಕಥೆಗಳನ್ನು ಹೇಳಿ ಹಂತಹಂತವಾಗಿ ದೂರುದಾರರಿಂದ ಒಟ್ಟು ₹87,22,710 ಹಣವನ್ನು ತನ್ನ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾಳೆ.

ಹಣ ಪಡೆದ ನಂತರ ಆರೋಪಿತೆಯು ಮೊಬೈಲ್ ಕರೆಗಳಿಗೆ ಸಿಗದೆ, ಹಣವನ್ನೂ ಹಿಂದಿರುಗಿಸದೇ ನಂಬಿಕೆದ್ರೋಹ ಎಸಗಿದ್ದಾಳೆ. ಈ ಕುರಿತು ದೂರು ಸ್ವೀಕರಿಸಿರುವ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ (ಅ ಕ್ರ ನಂ: 78/2026) ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page