;
top of page

​ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: 'ನೋ ವರ್ಕ್, ನೋ ಪೇ' ಎಚ್ಚರಿಕೆ ನೀಡಿದ ಸರ್ಕಾರ!

  • May 19
  • 1 min read

ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಶೇ. 25ರಷ್ಟು ವೇತನ ಹೆಚ್ಚಳ ಹಾಗೂ 38 ತಿಂಗಳ ಬಾಕಿ ಬಿಡುಗಡೆಗೆ ಜಂಟಿ ಕ್ರಿಯಾ ಸಮಿತಿ ಪಟ್ಟು ಹಿಡಿದಿದ್ದು, ಸರ್ಕಾರದ ಶೇ. 12.5ರಷ್ಟು ವೇತನ ಪರಿಷ್ಕರಣೆಯನ್ನು ತಿರಸ್ಕರಿಸಿದೆ.

ಇದಕ್ಕೆ ತಿರುಗೇಟು ನೀಡಿರುವ ರಾಜ್ಯ ಸರ್ಕಾರ ಮತ್ತು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್ ಪಾಷಾ ನೌಕರರಿಗೆ ಬಿಗ್ ಶಾಕ್ ನೀಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾದರೆ 'ನೋ ವರ್ಕ್, ನೋ ಪೇ' (ಕೆಲಸವಿಲ್ಲದಿದ್ದರೆ ವೇತನವಿಲ್ಲ) ನಿಯಮ ಜಾರಿಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಸಾರಿಗೆ ಸಂಸ್ಥೆಯು ಸಾರ್ವಜನಿಕ ಉಪಯುಕ್ತ ಸಂಸ್ಥೆಯಾಗಿದ್ದರಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ಅನಿವಾರ್ಯ ಕಾರಣಗಳಿಲ್ಲದೆ ರಜೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಂಸ್ಥೆ ಎಚ್ಚರಿಕೆ ನೀಡಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page