ಮೇ 3 ರಿಂದ ಕರ್ನಾಟಕದಲ್ಲಿ ಮಳೆ ಅಬ್ಬರ
- May 3
- 1 min read

ರಾಜ್ಯದ ಹಲವು ಭಾಗಗಳಲ್ಲಿ ಮೇ 3 ರಿಂದ ಮೇ 9 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರೈತರು ಮತ್ತು ಸಾರ್ವಜನಿಕರು ಹವಾಮಾನ ವೈಪರೀತ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.

ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ. ನಂತರ ಮೇ 5 ರಿಂದ ಕೊಪ್ಪಳ, ಯಾದಗಿರಿ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.







Comments