;
top of page

ದಶಮ ವಾರ್ಷಿಕೋತ್ಸವದ ಅಂಗವಾಗಿ ಮೇ 10ರಂದು ಸ್ನೇಹಿತರ ಬಳಗ (ರಿ.) ಕಲ್ಪಡ, ಕೊಡಿಯಾಲ ಬೃಹತ್ ಆಧಾರ್ ಹಾಗೂ ವಿಮಾ ಶಿಬಿರ

  • Apr 29
  • 1 min read

ಕಲ್ಪಡ–ಕೊಡಿಯಾಲ ಭಾಗದ ಜನತೆಗೆ ಆಧಾರ್ ಸಂಬಂಧಿತ ಸೇವೆಗಳು ಹಾಗೂ ವಿಮಾ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಸ್ನೇಹಿತರ ಬಳಗ (ರಿ.) ಕಲ್ಪಡ, ಕೊಡಿಯಾಲ ತನ್ನ ದಶಮ ವಾರ್ಷಿಕೋತ್ಸವದ ಅಂಗವಾಗಿ ಬೃಹತ್ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರಕ್ಕೆ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದೊಂದಿಗೆ .


ಮೇ 10, 2026 ರಂದು ಕೊಡಿಯಾಲದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆ ನಡೆಯಲಿರುವ ಈ ಶಿಬಿರದಲ್ಲಿ ಬೆಳಿಗ್ಗೆ 9:00ರಿಂದ ಸಂಜೆ 4:30ರವರೆಗೆ ವಿವಿಧ ಸೇವೆಗಳು ಲಭ್ಯವಿರಲಿವೆ


ಶಿಬಿರದಲ್ಲಿ ಹೊಸ ಆಧಾರ್ ನೋಂದಣಿ, ಹೆಸರು, ವಿಳಾಸ ಹಾಗೂ ಜನ್ಮ ದಿನಾಂಕ ತಿದ್ದುಪಡಿ ಸೇರಿದಂತೆ ವಿವಿಧ ಆಧಾರ್ ಸೇವೆಗಳು ಒದಗಿಸಲಾಗುತ್ತದೆ. ಜೊತೆಗೆ ಅಪಘಾತ ಮತ್ತು ಆರೋಗ್ಯ ವಿಮಾ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ವ್ಯವಸ್ಥೆಯೂ ಇರಲಿದೆ.

18 ವರ್ಷ ಮೇಲ್ಪಟ್ಟವರಿಗೆ ಹೊಸ ಆಧಾರ್ ನೋಂದಣಿ ಅವಕಾಶ ನೀಡಲಾಗಿದ್ದು, ಅಗತ್ಯ ದಾಖಲೆಗಳಾಗಿ ಜನನ ಪ್ರಮಾಣ ಪತ್ರ ಮತ್ತು ಪೋಷಕರ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಅಪ್ರಾಪ್ತರಿಗಾಗಿ ಪೋಷಕರು ಹಾಜರಾಗಬೇಕು ಎಂದು ಆಯೋಜಕರು ತಿಳಿಸಿದ್ದಾರೆ.

ಹೆಸರು, ವಿಳಾಸ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಪಾನ್ ಕಾರ್ಡ್, ಪಾಸ್ಪೋರ್ಟ್, ವೋಟರ್ ಐಡಿ, ರೇಷನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳು ಸೇರಿದಂತೆ ಮಾನ್ಯ ದಾಖಲೆಗಳನ್ನು ತರಬೇಕು. ವಿಳಾಸ ಬದಲಾವಣೆಗೆ ಬ್ಯಾಂಕ್ ಪಾಸ್ ಬುಕ್ ಮತ್ತು ವಾಸ್ತವ್ಯ ದೃಢೀಕರಣ ಪತ್ರವೂ ಮಾನ್ಯವಾಗಿವೆ.ಇನ್ನೂ ಇ-ಮೇಲ್, ಮೊಬೈಲ್ ಸಂಖ್ಯೆ, ಲಿಂಗ ಬದಲಾವಣೆ, ಬಯೋಮೆಟ್ರಿಕ್ ಅಪ್ಡೇಟ್ ಮತ್ತು ಫೋಟೋ/ಫಿಂಗರ್ ಪ್ರಿಂಟ್ ತಿದ್ದುಪಡಿಗಳಿಗೆ ಯಾವುದೇ ದಾಖಲೆಗಳ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಲಾಗಿದೆ.ಶಿಬಿರಕ್ಕೆ ಬರುವವರು ಎಲ್ಲಾ ದಾಖಲೆಗಳ ಮೂಲ ಪ್ರತಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ. ಕಲ್ಪಡ–ಕೊಡಿಯಾಲ ಸುತ್ತಮುತ್ತಲಿನ ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page