;
top of page

ಸಚಿವ ಮುನಿಯಪ್ಪರನ್ನು ಭೇಟಿ ಮಾಡಿದ ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ; ಜಿಲ್ಲೆಯ ಸಮಸ್ಯೆ, ಹಲವು ಬೇಡಿಕೆಗಳ ಕುರಿತು ಚರ್ಚೆ

7 hours ago
1 min read

ಮಂಗಳೂರು: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಮುನಿಯಪ್ಪ ಅವರನ್ನು ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಅವರು ಇಂದು ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿ ಮಾಡಿದರು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಸ್ಥಳೀಯವಾಗಿ ಗಮನಹರಿಸಬೇಕಾದ ಹಲವು ವಿಚಾರಗಳ ಕುರಿತು ಸಚಿವರೊಂದಿಗೆ ಚರ್ಚೆ ನಡೆಸಲಾಯಿತು. ಜೊತೆಗೆ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಸಚಿವರ ಮುಂದಿಟ್ಟು, ಅವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಭೇಟಿಯ ಸಂದರ್ಭದಲ್ಲಿ ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂದು ಪವನ್ ಕುಮಾರ್ ಶಿರ್ವ ತಿಳಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page