;
top of page

ಮೂಡಬಿದ್ರೆ : ತಿರುವಿನಲ್ಲಿ ಸ್ಕೂಟರ್‌ ನಿಯಂತ್ರಣ ತಪ್ಪಿ ಅಪಘಾತ; 17ರ ಹರೆಯದ ಪಿಯುಸಿ ವಿದ್ಯಾರ್ಥಿ ಸಾವು

Oct 8
1 min read

ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೋಟೆಬಾಗಿಲಿನ ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ಚಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಪ್ರಶ್ಚಿತ್ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲಿನತ್ತ ತೆರಳುತ್ತಿದ್ದರು. ವೀರ ಮಾರುತಿ ದೇವಸ್ಥಾನದ ಸಮೀಪದ ತಿರುವಿನಲ್ಲಿ ಸ್ಕೂಟರ್‌ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಪ್ರಶ್ಚಿತ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ದೀಕ್ಷಿತ್ ಅವರಿಗೂ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಪ್ರಶ್ಚಿತ್ ಅವರ ತಲೆಗೆ ಉಂಟಾಗಿದ್ದ ಆಂತರಿಕ ಗಾಯ ತೀವ್ರವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿದ ಬಳಿಕ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page