;
top of page

MRPL ಸ್ಫೋಟ ದುರಂತ: ಮುಲ್ಕಿ ಮೂಲದ 23 ವರ್ಷದ ಮನೀಶ್ ಕರ್ಕೇರಾ ಮೃತ್ಯು

Sep 30
1 min read

ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL) ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ ಹಾಗೂ ಬೆಂಕಿ ಅವಘಡದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಮುಲ್ಕಿ ಮೂಲದ 23 ವರ್ಷದ ಮನೀಶ್ ಕರ್ಕೇರಾ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದ ಬಳಿಕ ತಾನು ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ಮನೀಶ್ ನಾಪತ್ತೆಯಾಗಿದ್ದರು. ರಕ್ಷಣಾ ತಂಡಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅವಶೇಷಗಳ ನಡುವೆ ಸುಟ್ಟ ಸ್ಥಿತಿಯಲ್ಲಿದ್ದ ಅವರ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕರು ಗಂಭೀರ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಇನ್ನು ಎಂಟು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page