ಖಾಕಿ ಪಡೆಗೆ ಕಪ್ಪುಚುಕ್ಕೆ: ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಹಣಕ್ಕಾಗಿ ಸುಲಿಗೆ!
- Mar 17
- 1 min read

ಖಾಕಿ ಪಡೆಗೆ ಮತ್ತೊಂದು ಕಪ್ಪು ಚುಕ್ಕೆ ಬಂದಿದೆ. ಮೂಡುಬಿದಿರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಸಾಲು ಸಾಲು ಲೈಂಗಿಕ ಕಿರುಕುಳ ಹಾಗೂ ಸುಲಿಗೆಯ ಗಂಭೀರ ಆರೋಪಗಳು ಕೇಳಿಬಂದಿವೆ. ಗಂಡನನ್ನು ಬಂಧಿಸಿದ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ.

ಪೋಸ್ಟಿಂಗ್‌ಗಾಗಿ ತಾವು 50 ಲಕ್ಷ ರೂ. ಲಂಚ ನೀಡಿರುವುದಾಗಿ ಹೇಳಿಕೊಳ್ಳುತ್ತಿದ್ದ ಇನ್ಸ್‌ಪೆಕ್ಟರ್, ಸಾರ್ವಜನಿಕರಿಂದ ಹಣಕ್ಕಾಗಿ ಸುಲಿಗೆ ಮಾಡುತ್ತಿದ್ದರು. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವ ಬೆದರಿಕೆ ಹಾಕುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಸ್ಥಳೀಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆ, ಸಂತ್ರಸ್ತೆಯರು ನೇರವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮಹಿಳೆಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.







Comments