ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ!
- sathyapathanewsplu
- 3 hours ago
- 1 min read

ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ ಕ್ಷುಲ್ಲಕ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಕ್ (48) ಎಂಬುವವರೇ ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೋಲಿ ಗ್ರಾಮದ ಪ್ರಜ್ವಲ್ ಪಾಟೀಲ, ನಿಖಿಲ್ ಚೌಗಲೆ, ವಿವೇಕ್ ಚೌಗುಲೆ ಮತ್ತು ಶ್ರೀಧರ್ ಪಾಟೀಲ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಾತ್ರೆ ಮುಗಿಸಿ ಮದ್ಯದ ಅಮಲಿನಲ್ಲಿ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದ ಯುವಕರು, ಅಂಗಡಿ ಮುಚ್ಚುತ್ತಿದ್ದ ಯಲ್ಲಪ್ಪ ಅವರ ಬಳಿ ಸಿಗರೇಟ್ ಪಡೆದಿದ್ದಾರೆ. ಸಿಗರೇಟ್ ಸೇದಿದ ಬಳಿಕ ಹಣ ಪಾವತಿಸುವಂತೆ ಯಲ್ಲಪ್ಪ ಕೇಳಿದಾಗ ಯುವಕರು ಜಗಳ ತೆಗೆದಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ನಾಲ್ವರು ಯುವಕರು ಯಲ್ಲಪ್ಪ ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ. ಘಟನೆ ನಡೆದ ಅರ್ಧ ಗಂಟೆಯಲ್ಲೇ ಕಾರ್ಯಪ್ರವೃತ್ತರಾದ ಕಾಕತಿ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.






Comments