;
top of page

ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಶಾಕ್

  • Mar 10
  • 1 min read

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾಗೆ ಹಿನ್ನಡೆಯಾಗಿದೆ. ಯಾದಗಿರಿಯ ವಿಶೇಷ ನ್ಯಾಯಾಲಯವು ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು, ಆರೋಪಿಗೆ ರಕ್ಷಣೆ ನೀಡಲು ನಿರಾಕರಿಸಿದ್ದಾರೆ. ಈ ತೀರ್ಪಿನಿಂದಾಗಿ ಪೋಕ್ಸೋ (POCSO) ಕಾಯಿದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮುತ್ಯಾಗೆ ಬಂಧನದ ಭೀತಿ ಎದುರಾಗಿದೆ.

ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ, ಮಲ್ಲಿಕಾರ್ಜುನ ಮುತ್ಯಾ ಈಗ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಬೇಕಿದೆ. ಸದ್ಯಕ್ಕೆ ಕಾನೂನು ಸಂಕಷ್ಟ ಮುಂದುವರಿದಿದ್ದು, ಪೊಲೀಸ್ ತನಿಖೆ ಚುರುಕುಗೊಂಡಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page