ನಾಗರಪಂಚಮಿ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ

ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಾಗರಪಂಚಮಿ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಗೆ ಅನುಕೂಲವಾಗುವಂತೆ ಈ ರಜೆ ಘೋಷಿಸಲಾಗಿದ್ದು, ಸಂಬಂಧಪಟ್ಟ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳು ರಜೆಯನ್ನು ಪಾಲಿಸುವಂತೆ ಸೂಚಿಸಲಾಗಿದೆ.







Comments