ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ

ಸಚಿವ ಸಂಪುಟ ಪುನಾರಚನೆ ಅಥವಾ ಪಕ್ಷದ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಎಂಎಲ್‌ಸಿ ನಜೀರ್ ಅಹ್ಮದ್ ಕೊನೆಗೂ ರಾಜೀನಾಮೆ ನೀಡಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಕಟ್ಟುನಿಟ್ಟಿನ ಗಡುವಿಗೆ ಮಣಿದ ನಜೀರ್ ಅಹ್ಮದ್, ಸೋಮವಾರ ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತವಾಗಿ ರವಾನಿಸಿದ್ದಾರೆ.

ಒಂದು ವೇಳೆ ನಿಗದಿತ ಸಮಯದೊಳಗೆ ರಾಜೀನಾಮೆ ನೀಡದಿದ್ದರೆ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಸಿಎಂಗೆ ಸೂಚಿಸಲಾಗುವುದು ಎಂದು ಹೈಕಮಾಂಡ್ ಎಚ್ಚರಿಕೆ ನೀಡಿತ್ತು. ಈ ತೀವ್ರ ರಾಜಕೀಯ ಒತ್ತಡಕ್ಕೆ ಮಣಿದು ನಜೀರ್ ಅಹ್ಮದ್ ತಮ್ಮ ಸ್ಥಾನ ತೆರವುಗೊಳಿಸಿದ್ದು, ತೆರವಾದ ಈ ಪ್ರಭಾವಿ ಹುದ್ದೆಗೆ ಮುಂದಿನ ದಿನಗಳಲ್ಲಿ ಯಾರನ್ನು ನೇಮಿಸಲಾಗುತ್ತದೆ ಎಂಬ ಕುತೂಹಲ ಈಗ ರಾಜಕೀಯ ವಲಯದಲ್ಲಿ ಮನೆಮಾಡಿದೆ.







Comments