ನಾಸಿಕ್‌ನಲ್ಲಿ ಭೀಕರ ಅಪಘಾತ: ಬಾವಿಗೆ ಉರುಳಿದ ಕಾರು; ಒಂದೇ ಕುಟುಂಬದ 6 ಮಕ್ಕಳು ಸೇರಿ 9 ಮಂದಿ ಸಾವು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆರು ಮುಗ್ಧ ಮಕ್ಕಳು ಸೇರಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ. ಇಂದೋರ್ ಗ್ರಾಮದ ದರ್ಗುಡೆ ಕುಟುಂಬದವರು ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಹೃದಯವಿದ್ರಾವಕ ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಡೆಸಿದರು. ನೀರು ತುಂಬಿದ್ದ ಬಾವಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಅತೀ ವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ದಿಂಡೋರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.







Comments