;
top of page

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಅಜಿಂಕ್ಯ ರಹಾನೆ ದಿಢೀರ್ ವಿದಾಯ: ‘ಕ್ಯಾಪ್ 278’ ಪಯಣ ಅಂತ್ಯ!

Jul 30
1 min read

ಭಾರತೀಯ ಕ್ರಿಕೆಟ್‌ ತಂಡದ ಹಿರಿಯ ಆಟಗಾರ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮುಂಬೈ ಮೂಲದ ಈ ಅನುಭವಿ ಬ್ಯಾಟರ್ ತಮ್ಮ ಸುದೀರ್ಘ ಕ್ರಿಕೆಟ್ ಪಯಣಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ನಿವೃತ್ತಿ ಕುರಿತು ಕೃತಜ್ಞತೆ ಸಲ್ಲಿಸಿರುವ ರಹಾನೆ, ಸಾಮಾನ್ಯ ಹಿನ್ನೆಲೆಯಿಂದ ಬಂದು ಜಗತ್ತಿನ ಬೃಹತ್ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸಿದ್ದು ನನ್ನ ಪಾಲಿನ ದೊಡ್ಡ ಸೌಭಾಗ್ಯ. ನನ್ನ ಬೆಳವಣಿಗೆಗೆ ಶ್ರಮಿಸಿದ ಎಲ್ಲಾ ತರಬೇತುದಾರರು, ಮಾರ್ಗದರ್ಶಕರು, ಸಹ ಆಟಗಾರರು ಹಾಗೂ ಪೋಷಕ ಸಿಬ್ಬಂದಿಗೆ ಧನ್ಯವಾದಗಳು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿರುವ ಅವರು, ‘ಕ್ಯಾಪ್ 278 ವಿದಾಯ ಹೇಳುತ್ತಿದೆ. ಇಷ್ಟು ವರ್ಷಗಳ ಕಾಲ ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಸದಾ ಕೃತಜ್ಞನಾಗಿರುತ್ತೇನೆ’ ಎಂದು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ರಹಾನೆ ಅವರ ಈ ನಿರ್ಧಾರ ಕ್ರಿಕೆಟ್ ಪ್ರೇಮಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page