;
top of page

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ಮತ್ತೊಬ್ಬಳು ವಿದ್ಯಾರ್ಥಿನಿ ಆತ್ಮಹತ್ಯೆ

Jul 28
1 min read

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸುತ್ತಲಿನ ವಿವಾದಗಳು ದೇಶಾದ್ಯಂತ ತಣ್ಣಗಾಗದ ಬೆನ್ನಲ್ಲೇ, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆಷಾಢ ಏಕಾದಶಿಯ ಶುಭ ದಿನದಂದು ಪೋಷಕರು ಹಾಗೂ ಸಹೋದರ ಪಂಡರಪುರಕ್ಕೆ ತೆರಳಿದ್ದ ವೇಳೆ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಆಕೆ ಸಂಜೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರುಪರೀಕ್ಷೆಯಲ್ಲಿ ಅಂಕಿತಾಗೆ ಕೇವಲ 166 ಅಂಕಗಳು ಬಂದಿದ್ದವು. ಅರ್ಹತಾ ಕಟ್‌ಆಫ್ ಅಂಕ 177 ಆಗಿದ್ದರಿಂದ, ಕೇವಲ 11 ಅಂಕಗಳ ಅಂತರದಲ್ಲಿ ವೈದ್ಯಕೀಯ ಸೀಟು ಕೈತಪ್ಪಿತ್ತು. ಇದರಿಂದ ತೀವ್ರ ಮನನೊಂದಿದ್ದ ಆಕೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಂಬಂಧಿಕರು ಮನೆಗೆ ಬಂದಾಗ ಈ ದುರಂತ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಕರ್ಣತ್ ಪೊಲೀಸರು ಪ್ರಕರಣವನ್ನು ಅಸಹಜ ಸಾವು ಎಂದು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳದಲ್ಲಿ ಪೊಲೀಸರಿಗೆ ಅಂಕಿತಾ ಬರೆದಿದ್ದರೆನ್ನಲಾದ ಅತ್ಯಂತ ಭಾವುಕ ಡೆತ್‌ನೋಟ್ ಲಭ್ಯವಾಗಿದೆ. ಅದರಲ್ಲಿ ತಮ್ಮ ಹೆತ್ತವರ ಕ್ಷಮೆ ಕೋರಿರುವ ಆಕೆ, "ಅಮ್ಮಾ-ಅಪ್ಪಾ, ನನಗಾಗಿ ನೀವು ಎಷ್ಟೋ ಶ್ರಮಪಟ್ಟಿದ್ದೀರಿ, ನಾನು ನೀಟ್ ಓದುತ್ತಿದ್ದಾಗಲೂ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ. ಆದರೆ ನಿಮ್ಮ ಆಸೆಯನ್ನು ಈಡೇರಿಸಲು ನನ್ನಿಂದ ಸಾಧ್ಯವಾಗಲಿಲ್ಲ. ಅಣ್ಣಾ, ಹೆತ್ತವರನ್ನು ಚೆನ್ನಾಗಿ ನೋಡಿಕೋ. ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ" ಎಂದು ಬರೆದಿದ್ದಾಳೆ. ಈ ಘಟನೆಯು ಆಕೆಯ ಕುಟುಂಬ ಹಾಗೂ ಗ್ರಾಮಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page