;
top of page

ಯುಜಿಸಿ ನೀಟ್ ಮರುಪರೀಕ್ಷೆ ಜೂನ್ 21ಕ್ಕೆ

May 15
1 min read

ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಹಿನ್ನೆಲೆ ಎನ್‌ಟಿಎ ಮರುಪರೀಕ್ಷೆ ಘೋಷಣೆ

ನವದೆಹಲಿ, ಮೇ 15: ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದ್ದ ನೀಟ್ ಯುಜಿ 2026 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮರುನಡೆಸಲು ತೀರ್ಮಾನಿಸಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಇದೀಗ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸುವುದಾಗಿ ಎನ್‌ಟಿಎ ಅಧಿಕೃತವಾಗಿ ಪ್ರಕಟಿಸಿದೆ.

ಮೇ 3ರಂದು ನಡೆದಿದ್ದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಮರುಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರಿಂದ, ಈ ಬೆಳವಣಿಗೆ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಆತಂಕ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ವಿದ್ಯಾರ್ಥಿಗಳು ಮರುಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಥವಾ ನೋಂದಣಿ ಮಾಡುವ ಅಗತ್ಯವಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಯೇ ಮಾನ್ಯವಾಗಿದ್ದು, ಹಳೆಯ ನೋಂದಣಿ ವಿವರಗಳನ್ನೇ ಪರಿಗಣಿಸಲಾಗುತ್ತದೆ.

ಪರೀಕ್ಷೆಗೆ ಕೆಲ ದಿನಗಳ ಮೊದಲು ಹೊಸ ಪ್ರವೇಶ ಪತ್ರಗಳನ್ನು ಎನ್‌ಟಿಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಕೈಗೆತ್ತಿಕೊಂಡಿದ್ದು, ವಿವಿಧ ಸ್ಥಳಗಳಲ್ಲಿ ತನಿಖೆ ಮುಂದುವರಿದಿದೆ.

ಘಟನೆ ದೇಶವ್ಯಾಪಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್ ಗಮನಿಸುತ್ತಿರಲು ಸೂಚಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page