ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
- Mar 15
- 1 min read

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಮಾಗಡಿಯ ಅಗ್ನಿಶಾಮಕ ದಳ, ಕುದೂರು ಪೊಲೀಸರು ಹಾಗೂ ಟೋಲ್ ಸಿಬ್ಬಂದಿ ಕೂಡಲೇ ಧಾವಿಸಿದರು. ಎರಡು ಬೃಹತ್ ಕ್ರೇನ್‌ಗಳ ಸಹಾಯದಿಂದ ಪಲ್ಟಿಯಾದ ಟ್ಯಾಂಕರ್ ಅನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿದ್ದರೆ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಆದರೆ, ಅಧಿಕಾರಿಗಳ ಸಮಯಪ್ರಜ್ಞೆ ಮತ್ತು ಜಾಗರೂಕತೆಯಿಂದ ಯಾವುದೇ ಅಪಾಯವಿಲ್ಲದೆ ಟ್ಯಾಂಕರ್ ಅನ್ನು ಮೇಲೆತ್ತಲಾಗಿದ್ದು, ಭೀಕರ ದುರಂತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.







Comments