;
top of page

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ; ಪ್ರಥಮ ಪಿಯು ವಿದ್ಯಾರ್ಥಿ ಸಾವು

Oct 22
1 min read

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯ ಕರ್ಬಸಂಕ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೆಲ್ಯಾಡಿಯಲ್ಲಿ ‘ಪ್ಲವರ್ಸ್ ಹೋಟೆಲ್’ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ, 16 ವರ್ಷದ ಅಶ್ವಿನ್ ಜೋಜೋ ಜೋರ್ಜ್ ಮೃತ ದುರ್ದೈವಿ. ಇವರು ಪುತ್ತೂರಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಅಶ್ವಿನ್ ಅವರ ಕಾರು ಮುಂಜಾನೆ ವೇಳೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page