;
top of page

ನೇಪಾಳ ಪ್ರವಾಹ: ಬಲಿಯಾದವರ ಸಂಖ್ಯೆ 270ಕ್ಕೆ ಏರಿಕೆ, 288 ಭಾರತೀಯರು ನಾಪತ್ತೆ

Aug 27
1 min read

ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹಕ್ಕೆ ಮಡಿದವರ ಸಂಖ್ಯೆ 270 ದಾಟಿದೆ. ಅಲ್ಲಿಗೆ ತೆರಳಿದ್ದ 288 ಭಾರತೀಯ ಪ್ರಜೆಗಳು ಪ್ರಸ್ತುತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಚಿತಪಡಿಸಿದೆ.

ಪರಿಸ್ಥಿತಿಯ ಮೇಲ್ವಿಚಾರಣೆ ಹಾಗೂ ಸಂತ್ರಸ್ತರಿಗೆ ನೆರವಾಗಲು ದೆಹಲಿ ಮತ್ತು ಕಠ್ಮಂಡುವಿನಲ್ಲಿ ವಿಶೇಷ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಂದ ತಮಿಳುನಾಡಿನ 21 ಭಾರತೀಯರನ್ನು ಯಶಸ್ವಿಯಾಗಿ ರಕ್ಷಿಸಿ ವಾಪಸ್ ಕರೆತರಲಾಗುತ್ತಿದೆ.

ಇತ್ತ ಚೀನಾ ಗಡಿಯ ಟಿಬೆಟ್ ಭಾಗದಲ್ಲಿ ಸುಮಾರು 200 ಕೈಲಾಸ ಮಾನಸಸರೋವರ ಯಾತ್ರಿಕರು ಸಿಲುಕಿಕೊಂಡಿದ್ದು, ರಕ್ಷಣೆಗಾಗಿ ಭಾರತ ಸರ್ಕಾರದ ನೆರವು ಕೋರಿದ್ದಾರೆ. ರಕ್ಷಣಾ ಕಾರ್ಯಾಚರಣೆ ತೀವ್ರವಾಗಿ ಸಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page