;
top of page

ನೆಟ್ಟಣ ರೈಲು ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

  • Mar 4
  • 1 min read

ಸಾರ್ವಜನಿಕರ ದೂರು ಹಾಗೂ ರೈಲು ಬಳಕೆದಾರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಕಡಬ ತಾಲೂಕಿನ ನೆಟ್ಟಣ (ಸುಬ್ರಹ್ಮಣ್ಯ ರೋಡ್) ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಲ್ದಾಣದ ಆವರಣ ಮತ್ತು ಶೌಚಾಲಯಗಳಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರತಿದಿನ ಪರಿಸರವನ್ನು ಶುಚಿಯಾಗಿಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪರಿಶೀಲನೆಯ ವೇಳೆ ಮಹಿಳಾ ವಿಶ್ರಾಂತಿ ಗೃಹದಲ್ಲಿ ಪುರುಷರು ವಾಸ್ತವ್ಯ ಹೂಡಿರುವುದನ್ನು ಗಮನಿಸಿದ ಶಾಸಕರು, ಭದ್ರತಾ ಲೋಪದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಿರ್ದೇಶಿಸಿದರು. ಅಲ್ಲದೆ, ನಿಲ್ದಾಣದ ವ್ಯವಸ್ಥೆಗಳನ್ನು ಗಮನಿಸಲು ಕಡಬ ತಹಶೀಲ್ದಾರ್ ಅಥವಾ ಸಂಬಂಧಪಟ್ಟ ಅಧಿಕಾರಿಗಳು ತಿಂಗಳಿಗೊಮ್ಮೆ ಇಲ್ಲಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಅವರು ಆದೇಶಿಸಿದರು.

ಇದೇ ಸಂದರ್ಭದಲ್ಲಿ ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕರು, ಬಾಕಿ ಇರುವ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಸದರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ಪ್ರಭಾಕರ ಖಜುರೆ, ರೈಲು ಬಳಕೆದಾರರ ಸಂಘದ ಅಧ್ಯಕ್ಷ ಪ್ರಸಾದ್ ನೆಟ್ಟಣ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page