ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ: ಐಎಂಡಿ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರತೆ ಕಳೆದುಕೊಂಡಿರುವ ನಡುವೆಯೇ, ಮುಂದಿನ ಐದು ದಿನಗಳ ಕಾಲ ಅಂದರೆ ಜೂನ್ 24ರವರೆಗೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯ ಸ್ಥಿತಿಯಲ್ಲಿದ್ದು, ಇಂದಿನಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಾರುತಗಳು ತೀವ್ರಗೊಳ್ಳಲಿವೆ. ಇದರಿಂದಾಗಿ ಈ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 21 ರಿಂದ ಮುಂಗಾರು ಆರ್ಭಟ ಹೆಚ್ಚಾಗಲಿದ್ದು, ಕರಾವಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಒಳನಾಡು ಜಿಲ್ಲೆಗಳಲ್ಲೂ ಜೂನ್ 22 ಮತ್ತು 23ರಂದು ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.







Comments