;
top of page

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಉಮರ್ ಫಾರೂಕ್ ಎನ್‌ಐಎ ಬಲೆಗೆ

Aug 6
1 min read

ಮಂಗಳೂರು, ಆ.6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.



ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪಟ್ಟಿಯಲ್ಲಿ ಈತನ ಹೆಸರು ಇದ್ದು, ಮಾಹಿತಿ ನೀಡಿದವರಿಗೆ ಎನ್‌ಐಎ ₹2 ಲಕ್ಷ ಬಹುಮಾನ ಘೋಷಿಸಿತ್ತು.

2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ, ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಹಿಂದು ನಾಯಕರ ಹತ್ಯೆ ಸಂಚಿನ ಭಾಗವಾಗಿ ಕೃತ್ಯ ಎಸಗಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲವರು ತಲೆಮರೆಸಿಕೊಂಡಿದ್ದರು.

ಇತ್ತೀಚೆಗೆ ಬಂಧಿತ ಆರೋಪಿಗಳಾದ ನೌಷದ್ ಹಾಗೂ ನಾಸೀರ್ ಅವರ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದಲ್ಲಿ, ಕೊಚ್ಚಿಯಲ್ಲಿ ಅಡಗಿ ವಾಸಿಸುತ್ತಿದ್ದ ಉಮರ್ ಫಾರೂಕ್‌ನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ 13ನೇ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಉಮರ್ ಫಾರೂಕ್, ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ್ದಾನೆ ಎಂಬ ಆರೋಪವಿದೆ. ಸುಮಾರು ಎರಡು ವರ್ಷಗಳಿಂದ ಕೊಚ್ಚಿಯಲ್ಲಿ ನೆಲೆಸಿ ಉದ್ಯೋಗದಲ್ಲಿದ್ದ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಎನ್‌ಐಎ, ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.




Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page