ತೈಲ ಟ್ಯಾಂಕರ್‌ಗಳ ರಕ್ಷಣೆಗೆ ಟ್ರಂಪ್ ಆದೇಶ: ಹಾರ್ಮೂಜ್ ಜಲಸಂಧಿಯಲ್ಲಿ ಹೈ ಅಲರ್ಟ್
- 5 hours ago
- 1 min read

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಇರಾನ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆಯಕಟ್ಟಿನ ಪ್ರದೇಶವಾದ ಹಾರ್ಮೂಜ್ ಜಲಸಂಧಿ ಬಂದ್ ಆಗಿರುವುದರಿಂದ ಜಾಗತಿಕ ತೈಲ ಮಾರುಕಟ್ಟೆ ಹಾಗೂ ಭಾರತೀಯ ಸರಕು ಸಾಗಣೆ ವಲಯಕ್ಕೆ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಈ ಬಿಕ್ಕಟ್ಟಿನಿಂದಾಗಿ ತೈಲ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಹಾರ್ಮೂಜ್ ಜಲಸಂಧಿಯಲ್ಲಿ ಸಿಲುಕಿರುವ ತೈಲ ಟ್ಯಾಂಕರ್‌ಗಳಿಗೆ ಅಗತ್ಯಬಿದ್ದರೆ ಬೆಂಗಾವಲು ಒದಗಿಸುವಂತೆ ಅವರು ಅಮೆರಿಕ ನೌಕಾಪಡೆಗೆ ಸೂಚಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾರಿಗೆ ಭದ್ರತೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ಟ್ರಂಪ್ ಅವರ ಈ ಕಠಿಣ ನಿರ್ಧಾರವು ಸಂಘರ್ಷ ಪೀಡಿತ ಇರಾನ್ ಸುತ್ತಮುತ್ತಲಿನ ಸಮುದ್ರ ಮಾರ್ಗದಲ್ಲಿ ಮಿಲಿಟರಿ ಚಟುವಟಿಕೆಗಳನ್ನು ಹೆಚ್ಚಿಸಲಿದೆ. ಇದು ಜಾಗತಿಕ ಇಂಧನ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿಸಿದೆ.






Comments