;
top of page

ಇನ್ಮುಂದೆ ಆನ್‌ಲೈನ್‌ನಲ್ಲೇ ವಂಶವೃಕ್ಷ: ಸರ್ಕಾರದ ಹೊಸ ನಿಯಮ ಜಾರಿ

Jul 20
1 min read

ಕರ್ನಾಟಕ ಸರ್ಕಾರವು ವಂಶವೃಕ್ಷ ದೃಢೀಕರಣ ಪತ್ರ ನೀಡುವಿಕೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಏಕೀಕೃತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಇನ್ನು ಮುಂದೆ ವಂಶವೃಕ್ಷ ದೃಢೀಕರಣ ಪತ್ರವನ್ನು ಕೇವಲ ಆನ್‌ಲೈನ್ ತಂತ್ರಾಂಶದ ಮೂಲಕ ಮಾತ್ರ ವಿತರಿಸಲು ಕಡ್ಡಾಯಗೊಳಿಸಲಾಗಿದೆ.

ಅರ್ಜಿದಾರರು ಕಡ್ಡಾಯವಾಗಿ 100 ರೂ. ಛಾಪಾ ಕಾಗದದ ನೋಟರಿ ದೃಢೀಕೃತ ಅಫಿಡವಿಟ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ಗುರುತಿನ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯಾದ ನಂತರ ಗ್ರಾಮ ಆಡಳಿತ ಅಧಿಕಾರಿಗಳು ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿ, ರಾಜಸ್ವ ನಿರೀಕ್ಷಕರಿಗೆ ಶಿಫಾರಸು ಮಾಡಲಿದ್ದಾರೆ.

ಕೊನೆಯದಾಗಿ ರಾಜಸ್ವ ನಿರೀಕ್ಷಕರ ವರದಿಯನ್ನು ಪರಿಶೀಲಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಉಪ ತಹಶೀಲ್ದಾರರಿಗೆ ನೀಡಲಾಗಿದೆ. ಅನುಮೋದನೆಗೊಂಡ ಪತ್ರಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸಲಾಗುವುದು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page