;
top of page

ಪಾಕ್: ಭೀಕರ ಆತ್ಮಾಹುತಿ ದಾಳಿ: 31 ಸಾವು, 169ಕ್ಕೂ ಹೆಚ್ಚು ಮಂದಿಗೆ ಗಾಯ

  • Feb 6
  • 1 min read

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ತರ್ಲೈ ಇಮಾಮ್‌ಬರ್ಗಾ ದರ್ಗಾದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 31 ಮಂದಿ ಸಾವನ್ನಪ್ಪಿದ್ದು, 169ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪ್ರಧಾನಿ ಶೆಹಬಾಜ್ ಷರೀಫ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಬಲೂಚಿಸ್ತಾನದಲ್ಲಿ ಪಾಕ್ ಪಡೆಗಳು ನಡಸುತ್ತಿರುವ 'ರದ್ದ್-ಉಲ್-ಫಿಟ್ನಾ-1' ಕಾರ್ಯಾಚರಣೆಯ ನಡುವೆಯೇ ಈ ದಾಳಿ ನಡೆದಿದೆ. ಕಳೆದ ಮೂರು ತಿಂಗಳಲ್ಲಿ ಪಾಕಿಸ್ತಾನದಲ್ಲಿ ಸಂಭವಿಸಿದ 4ನೇ ದೊಡ್ಡ ಬಾಂಬ್ ದಾಳಿ ಇದಾಗಿದ್ದು, ದೇಶದಲ್ಲಿ ಭದ್ರತಾ ವೈಫಲ್ಯದ ಆತಂಕವನ್ನು ಹೆಚ್ಚಿಸಿದೆ. ಪ್ರಸ್ತುತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

 
 
 

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page