;
top of page

ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆ ರದ್ದು

  • Mar 19
  • 1 min read

ವಿಶ್ವದಾದ್ಯಂತ ಉಂಟಾಗಿರುವ ಇಂಧನ ಮತ್ತು ಅನಿಲ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನ, ಈ ಬಾರಿ ಮಾರ್ಚ್ 23ರಂದು ನಡೆಯಬೇಕಿದ್ದ ತನ್ನ 'ಗಣರಾಜ್ಯೋತ್ಸವ' ಆಚರಣೆಯನ್ನು ರದ್ದುಗೊಳಿಸಿದೆ. ತೀವ್ರ ಹಣಕಾಸಿನ ಮುಗ್ಗಟ್ಟು ಮತ್ತು ಇಂಧನ ಕೊರತೆಯಿಂದಾಗಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಸರ್ಕಾರದ ಈ ನಿರ್ಧಾರ ನೆರೆಹೊರೆಯ ರಾಷ್ಟ್ರಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ದೊಡ್ಡ ಮಟ್ಟದ ಕಾರ್ಯಕ್ರಮಗಳ ಬದಲಿಗೆ ಸರಳವಾಗಿ ಆಚರಿಸುವಂತೆ ಸರ್ಕಾರ ಜನರಿಗೆ ಸೂಚಿಸಿದೆ. "ಆಹಾರ ಮತ್ತು ಪಾನೀಯಗಳನ್ನು ಸೇವಿಸಿ ಅದ್ಧೂರಿಯಾಗಿ ಸಂಭ್ರಮಿಸಬೇಡಿ, ಕೇವಲ ಕೇಕ್ ಕತ್ತರಿಸಿ ಮನೆಗೆ ತೆರಳಿ" ಎಂದು ಜನರಲ್ಲಿ ವಿನಂತಿಸಲಾಗಿದೆ. ಈ ಮೂಲಕ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪಾಕಿಸ್ತಾನ ಸರ್ಕಾರವು ಉಳಿತಾಯದ ಹಾದಿ ಹಿಡಿದಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page