;
top of page

ಪಂಜಿಮೊಗರು ರಾಕೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

12 hours ago
1 min read

ಮಂಗಳೂರು: ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಬಳಿಯ ನಿವಾಸಿ ರಾಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸುನೀಲ್ ಕುಮಾರ್, ಪ್ರವೀಣ್ ಪೂಜಾರಿ, ಪ್ರೀತಮ್ ಹಾಗೂ ರೋಹಿತ್ ಕುಮಾರ್ ಶಿಕ್ಷೆಗೆ ಒಳಗಾದ ಆರೋಪಿಗಳು. 2019ರ ಜನವರಿ 3ರಂದು ಸುನೀಲ್ ಕುಮಾರ್ ತಂಗಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ರಾಕೇಶ್ ಅವರನ್ನು ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶ ರಾಜೇಶ್ ಮಾರುತಿ ಕಮಟೆ ಅವರು 1ರಿಂದ 3ನೇ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ಒಟ್ಟು ₹70,000 ದಂಡದಲ್ಲಿ ₹50,000 ಹಣವನ್ನು ಮೃತ ರಾಕೇಶ್ ಅವರ ತಂದೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರಕಾರಿ ಅಭಿಯೋಜಕ ಮೋತೀಲಾಲ್ ಚೌದರಿ ವಾದ ಮಂಡಿಸಿದ್ದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page