;
top of page

ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು: ಪೇಪರ್ ಸೋರಿಕೆ ಮಾಫಿಯಾಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ

Jul 31
1 min read

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ಬಿಡುಗಡೆ ಮಾಡಿದ ಹೊಸ ಸೆಲ್ಫಿ ವಿಡಿಯೋದಲ್ಲಿ, ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಂಗೀಕಾರಗೊಂಡಿರುವುದನ್ನು ಭಾರತದ ಇತಿಹಾಸದಲ್ಲಿ ಒಂದು ಪ್ರಮುಖ ಮತ್ತು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ. ಈ ಹೊಸ ಕಾನೂನಿನ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ಬಲ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯುವಜನರ ಭವಿಷ್ಯದ ಜೊತೆ ಆಟವಾಡುವ ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾ ಮತ್ತು ವಂಚನೆ ಅಕ್ರಮಗಳಲ್ಲಿ ಭಾಗಿಯಾಗಿರುವ ಗ್ಯಾಂಗ್‌ಗಳಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ ಎಂದು ಪ್ರಧಾನಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ದಶಕಗಳಿಂದ ದೇಶವನ್ನು ಕಾಡುತ್ತಿರುವ ಈ ಸಮಸ್ಯೆಯನ್ನು ಬುಡಸಮೇತ ಕಿತ್ತೊಗೆಯಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ವಿಕಸಿತ ಭಾರತದ ಕನಸನ್ನು ನನಸು ಮಾಡಲು ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಬಲಪಡಿಸುವುದು ಅತ್ಯಗತ್ಯ. ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಇನ್ನು ಹೆಚ್ಚಿನ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಮ್ಮ ೨.೨೬ ನಿಮಿಷಗಳ ವೀಡಿಯೊ ಸಂದೇಶದಲ್ಲಿ ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page