ರಾಜ್ಯಾದ್ಯಂತ ಇಂಧನ ಮಾರಾಟಕ್ಕೆ ಹೊಸ ಮಾರ್ಗಸೂಚಿ: ಕ್ಯಾನ್, ಬಾಟಲಿಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ
- May 13
- 1 min read

ರಾಜ್ಯದಲ್ಲಿ ಇಂಧನ ಕೊರತೆಯಾಗದಂತೆ ತಡೆಯಲು ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪೆಟ್ರೋಲಿಯಂ ನಿಯಮಗಳು 2002ರ ಅನ್ವಯ, ಇಂಧನ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಹೊಸ ನಿಯಮದಂತೆ, ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನವನ್ನು ಕೇವಲ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ತುಂಬಿಸಬೇಕು. ಬಾಟಲಿ, ಕ್ಯಾನ್ ಅಥವಾ ಇತರ ಕಂಟೇನರ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಾಹನಗಳಿಗೆ ಅಥವಾ ಅಧಿಕೃತ ಕಂಟೇನರ್‌ಗಳಿಗೆ ಗರಿಷ್ಠ 200 ಲೀಟರ್‌ಗಳ ಮಿತಿಯೊಳಗೆ ಮಾತ್ರ ಇಂಧನ ಪೂರೈಸಲು ಅವಕಾಶ ನೀಡಲಾಗಿದೆ.
ಬೃಹತ್ ಪ್ರಮಾಣದ ಇಂಧನ ಅಗತ್ಯವಿರುವ ಗ್ರಾಹಕರು ನೇರ ಮಾರಾಟ ಪ್ರಕ್ರಿಯೆಯ ಮೂಲಕವೇ ಪಡೆಯಬೇಕು. ಅನಧಿಕೃತ ದಾಸ್ತಾನು ಅಥವಾ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಡೀಸೆಲ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.







Comments