ಪ್ರಧಾನಿ ಮೋದಿ ಹತ್ಯೆಗೆ ಸಂಚು: ಬಿಹಾರದಲ್ಲಿ ಮೂವರ ಬಂಧನ

ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ) ನೀಡಿದ ಪ್ರಮುಖ ಸುಳಿವಿನ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದೆ. ಮುಖ್ಯ ಆರೋಪಿ ಅಮನ್ ತಿವಾರಿ ದೊಡ್ಡ ಮೊತ್ತದ ಹಣಕ್ಕಾಗಿ ಸಿಐಎಗೆ ಸಂದೇಶ ಕಳುಹಿಸಿ, ಪ್ರಧಾನಿ ಮೇಲೆ ದಾಳಿ ನಡೆಸಲು ಕಾಲಾವಕಾಶ ಕೋರಿದ್ದ ಎನ್ನಲಾಗಿದೆ.

ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಐಎ, ಐಪಿ ವಿಳಾಸದ ಸಮೇತ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದೆ. ತಡರಾತ್ರಿ ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಅಮನ್ ಮತ್ತು ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ವಿದೇಶಿ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿದ್ದು, ಪ್ರಸ್ತುತ ಕೇಂದ್ರ ತನಿಖಾ ಸಂಸ್ಥೆಗಳು ಇವರನ್ನು ತೀವ್ರ ವಿಚಾರಣೆಗೊಳಪಡಿಸಿವೆ.







Comments