ಬೆಳ್ತಂಗಡಿ: ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ, ಯುವತಿ ರಕ್ಷಣೆ
- May 11
- 1 min read

ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣಗೊಂಡ ಕ್ಯಾಂಟಿನ್ ಒಳಗೆ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ, 29 ವರ್ಷದ ಯುವತಿಯನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ (55) ಅವರು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದ ಸರ್ಕಾರಿ ಜಾಗದಲ್ಲಿ “ಪವನ್ ಕ್ಯಾಂಟಿನ್” ಎಂಬ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು ಎನ್ನಲಾಗಿದೆ.

ಪ್ರತಿ ಭಾನುವಾರ ಕ್ಯಾಂಟಿನ್‌ಗೆ ರಜೆ ಇರುತ್ತಿದ್ದ ಸಮಯವನ್ನು ದುರುಪಯೋಗಪಡಿಸಿಕೊಂಡು, ಕ್ಯಾಂಟಿನ್ ಒಳಗೆ ಬೆಡ್‌ರೂಂ ಹಾಗೂ ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆಸಿ ಗಿರಾಕಿಗಳಿಗೆ ಒದಗಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮೇ 10ರಂದು ಸಂಜೆ ಸುಮಾರು 5 ಗಂಟೆ ವೇಳೆ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬಯಲಾಗಿದೆ. ಈ ವೇಳೆ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಸೇರಿದಂತೆ ನಾವೂರು ನಿವಾಸಿ ಉಸ್ಮಾನ್ (38) ಮತ್ತು ಕಲ್ಲೇರಿ ನಿವಾಸಿ ಹೈದರ್ (45)ರನ್ನು ಬಂಧಿಸಲಾಗಿದೆ.
ದಾಳಿ ವೇಳೆ 29 ವರ್ಷದ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಸ್ಥಳದಿಂದ ಮೊಬೈಲ್ ಫೋನ್, ₹5,000 ನಗದು ಮತ್ತು ಗರ್ಭನಿರೋಧಕ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.







Comments