;
top of page

ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ: ಮೇ 26ರಿಂದ ಅರ್ಹತಾ ಪರೀಕ್ಷೆ

  • May 6
  • 1 min read

ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಪಡೆಯಲು ನಡೆಯುವ ಅರ್ಹತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.


ಈ ಪರೀಕ್ಷೆಗಳು ಮೇ 26ರಿಂದ ಮೇ 30ರವರೆಗೆ ನಡೆಯಲಿದ್ದು, ದಿನಕ್ಕೆ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮತ್ತು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಪರೀಕ್ಷೆಗಳು ನಡೆಯುತ್ತವೆ.

ಈ ಪರೀಕ್ಷೆಯನ್ನು ಈಗಾಗಲೇ ಎರಡು ಬಾರಿ ಮುಂದೂಡಲಾಗಿತ್ತು. ಮೊದಲ ಬಾರಿ ಶಾಲಾ ಪರೀಕ್ಷೆಗಳ ಕಾರಣದಿಂದ ಹಾಗೂ ನಂತರ ಜನಗಣತಿ ಕಾರ್ಯದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಜನಗಣತಿ ಕಾರ್ಯ ಮೇ 16ರೊಳಗೆ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದಲ್ಲಿರುವ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಸೂಚಿಸಿದ್ದಾರೆ.

ವಿಷಯವಾರು ಪರೀಕ್ಷಾ ವೇಳಾಪಟ್ಟಿ:

ಮೇ 26: ಕನ್ನಡ, ಉರ್ದು, ಗಣಿತ, ಜೀವಶಾಸ್ತ್ರ, ಇಂಗ್ಲಿಷ್, ಸಂಸ್ಕೃತ

ಮೇ 27: ಇತಿಹಾಸ, ಹಿಂದಿ

ಮೇ 29: ಅರ್ಥಶಾಸ್ತ್ರ, ರಾಜ್ಯಶಾಸ್ತ್ರ

ಮೇ 30: ಸಮಾಜಶಾಸ್ತ್ರ, ಭೂಗೋಳಶಾಸ್ತ್ರ


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page