;
top of page

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಮೊದಲ ದಿನ ಶೇ. 96.87 ರಷ್ಟು ಹಾಜರಾತಿ

  • 1 day ago
  • 1 min read

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆ ಅತ್ಯಂತ ಸುಸೂತ್ರವಾಗಿ ಜರುಗಿದೆ. ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಯಾವುದೇ ಅಕ್ರಮಗಳು ವರದಿಯಾಗಿಲ್ಲ. ಮೊದಲ ದಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,09,085 ವಿದ್ಯಾರ್ಥಿಗಳ ಪೈಕಿ 4,93,132 ಮಂದಿ ಹಾಜರಾಗಿದ್ದು, ಒಟ್ಟು ಶೇ. 96.87 ರಷ್ಟು ಹಾಜರಾತಿ ದಾಖಲಾಗಿದೆ. ಸುಮಾರು 15,953 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇದರಲ್ಲಿ 6,46,801 ಹೊಸಬರು ಹಾಗೂ 50,540 ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ. ವಿಭಾಗವಾರು ನೋಡುವುದಾದರೆ ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಮತ್ತು ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಹಾಗೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮೊದಲ ದಿನದ ಪರೀಕ್ಷೆಯು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ನೆಮ್ಮದಿ ಮೂಡಿಸಿದೆ. ಮುಂದಿನ ದಿನಗಳ ಪರೀಕ್ಷೆಗಳಿಗೂ ಇಲಾಖೆಯು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page