ಪುತ್ತೂರು ಕೋರ್ಟ್‌ನಲ್ಲಿ ಹೈಡ್ರಾಮ: ನ್ಯಾಯಾಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
- sathyapathanewsplu
- 6 hours ago
- 1 min read

ಪುತ್ತೂರು: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಕಾವು ನಿವಾಸಿ ರವಿ (35) ಎಂಬಾತನೇ ಈ ಕೃತ್ಯ ಎಸಗಿದವನು. ತಕ್ಷಣವೇ ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಕೋರ್ಟ್ ಸಂಕೀರ್ಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.





Comments