;
top of page

ಪುತ್ತೂರು: ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಎರಡು ವರ್ಷದ ಮಗು ದಿಢೀರ್ ಸಾವು

10 hours ago
1 min read

ಪುತ್ತೂರು: ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಎರಡು ವರ್ಷದ ಮುದ್ದು ಮಗು ದಿಢೀರನೆ ಅಸ್ವಸ್ಥಗೊಂಡು ಮೃತಪಟ್ಟ ಹೃದಯವಿದ್ರಾವಕ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆಸ್ಟಿನ್ ಎಂಬ ಎರಡು ವರ್ಷದ ಕಂದಮ್ಮ ಅಕ್ಟೋಬರ್ 29ರಂದು ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಫದ ತೊಂದರೆಯಿಂದ ಬಳಲುತ್ತಿದ್ದ ಆಸ್ಟಿನ್‌ನನ್ನು ಅಕ್ಟೋಬರ್ 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ನಂತರ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಪೋಷಕರು ಮನೆಗೆ ಕರೆತಂದಿದ್ದರು. ಆದರೆ, ಅಕ್ಟೋಬರ್ 29ರ ಮುಂಜಾನೆ ಎಂದಿನಂತೆ ಎದ್ದು ಅಣ್ಣಂದಿರೊಂದಿಗೆ ಆಟವಾಡುತ್ತಿದ್ದ ಮಗು, ಇದ್ದಕ್ಕಿದ್ದಂತೆ ದಿಢೀರ್ ಅಸ್ವಸ್ಥಗೊಂಡು ಪ್ರಾಣ ಬಿಟ್ಟಿದೆ.

ಆಟವಾಡುತ್ತಾ ನಲಿಯಬೇಕಿದ್ದ ಪುಟ್ಟ ಕಂದಮ್ಮನ ಅಕಾಲಿಕ ಸಾವು ಇಡೀ ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮುದ್ದಾದ ಮಗುವಿನ ಅಕಾಲಿಕ ಅಗಲಿಕೆಗೆ ಸ್ಥಳೀಯರು ಕೂಡ ತೀವ್ರ ಕಂಬನಿ ಮಿಡಿದಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page