ಪುತ್ತೂರು ದರ್ಬೆ ಬೈಪಾಸ್‌ನಲ್ಲಿ ಬ್ರೇಕ್ ವೈಫಲ್ಯ; ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್‌ಗೆ ಡಿಕ್ಕಿ

ಪುತ್ತೂರು: ದರ್ಬೆ ಬೈಪಾಸ್‌ನ ಅಶ್ವಿನಿ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಬಸ್ಸಿನಲ್ಲಿ ಬ್ರೇಕ್ ವೈಫಲ್ಯ ಉಂಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯಲ್ಲಿದ್ದ ಮನೆಯ ಕಾಂಪೌಂಡ್‌ಗೆ ನುಗ್ಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾಂಪೌಂಡ್‌ಗೆ ಹಾನಿಯಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.








Comments