ಪುತ್ತೂರು ದರ್ಬೆ ಗಲಾಟೆ: ಹಿಂದೂ ಜಾಗರಣ ವೇದಿಕೆಯಿಂದ ನಾಳೆ ಸ್ವಯಂಪ್ರೇರಿತ ಬಂದ್‌ಗೆ ಕರೆ

ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ.
ಘಟನೆಯನ್ನು ಖಂಡಿಸಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಆಗಸ್ಟ್ 25ರಂದು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ.
ದರ್ಬೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.







Comments