ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ಇಂದು (ಏ.1) ಗೊನೆ ಮುಹೂರ್ತ, ಏ.10ರಿಂದ ಜಾತ್ರೋತ್ಸವ ಆರಂಭ
- Apr 1
- 1 min read

ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂಭ್ರಮ ಆರಂಭಗೊಂಡಿದೆ. ಇದರ ಅಂಗವಾಗಿ ಏಪ್ರಿಲ್ 1ರಂದು ಬೆಳಿಗ್ಗೆ 9.15ರ ವೃಷಭ ಲಗ್ನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನೆರವೇರಲಿದೆ. ನಂತರ ಮಧ್ಯಾಹ್ನ ಭಕ್ತಾದಿಗಳಿಗೆ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ವತಿಯಿಂದ ಅನ್ನಸಂತರ್ಪಣೆ ನಡೆಯಲಿದೆ.

ಏಪ್ರಿಲ್ 10ರಂದು ಭವ್ಯ ಧ್ವಜಾರೋಹಣದೊಂದಿಗೆ ಅಧಿಕೃತವಾಗಿ ಜಾತ್ರೆಗೆ ಚಾಲನೆ ದೊರೆಯಲಿದ್ದು, ಪ್ರತಿದಿನ ಸಂಜೆ ಪೇಟೆ ಸವಾರಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಪುತ್ತೂರಿನ ಆರಾಧ್ಯ ದೈವದ ಈ ಮಹೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.







Comments