ಪುತ್ತೂರಿನಲ್ಲಿ 1.6 ಕ್ವಿಂಟಾಲ್ ಗಾಂಜಾ ವಶ; ಮೂವರು ಆರೋಪಿಗಳ ಬಂಧನ
- Feb 8
- 1 min read
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆಯಲ್ಲಿ ಪೊಲೀಸರು ಸುಮಾರು ರೂ.53 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆಜಿ 50 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಮೂಲದ ವ್ಯಕ್ತಿಯೊಬ್ಬರನ್ನು ಒಳಗೊಂಡಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ ಸಾಗಾಟಕ್ಕೆ ಹಣ ಹಾಗೂ ವಾಹನದ ವ್ಯವಸ್ಥೆ ಮಾಡಿಕೊಟ್ಟ ಆರೋಪಿಗಳಾಗಿ
ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27),
ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝೀರ್ (42)
ಮತ್ತು ಒಡಿಶಾ ಮೂಲದ ದೀಪಕ್ ಪಾತ್ರ (37) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಸಾಗಾಟ ಉದ್ದೇಶಕ್ಕಾಗಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು ಎನ್ನಲಾಗಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರೆಸುತ್ತಿದ್ದಾರೆ.









Comments